ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಾಗುತ್ತಿದ್ದು ಈ ಸಂಬಂಧ ಅತಿ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರಕಟಿಸಿದ್ದಾರೆ.
ಇದು ಜಾರಿಯಾಗುವ ಬಗ್ಗೆ ಯಾವುದೇ ಗೊಂದಲ ಇಟ್ಟುಕೊಳ್ಳಬೇಡಿ ಮತ್ತು ಕಡ್ಡಾಯವಾಗಿ ಜಾರಿಗೊಳಿಸುತ್ತೇವೆ. ಸಿ ಎ ಎಂ ಜಾರಿಗೆ ಅಗತ್ಯವಿರುವ ನಿಯಮಗಳನ್ನು ಲೋಕಸಭೆ ಚುನಾವಣೆಗೆ ಮುನ್ನವೇ ಹೊರಡಿಸುತ್ತೇವೆ. ಮತ್ತು ಇದು ಒಂದು ದೇಶದ ಕಾಯ್ದೆಯಾಗಿದೆ ಎಂದು ಅವರು ಹೇಳಿದರು.
2014 ರ ಡಿಸೆಂಬರ್ 31ಕ್ಕೂ ಮುನ್ನ ಭಾರತಕ್ಕೆ ಬಂದಿರುವ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಧರ್ಮೀಯರಿಗೆ ಭಾರತ ದ ಪೌರತ್ವ ನೀಡುವ ಕಾಯ್ದೆ ಇದಾಗಿದ್ದು, ಇದರಿಂದ ಮುಸ್ಲಿಮರನ್ನು ಹೊರಗಿಡಲಾಗಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳ ಅನುಭವಿಸಿ ಭಾರತಕ್ಕೆ ಬಂದವರಿಗೆ ಪೌರತ್ವ ನೀಡುವುದು ಈ ಕಾಯ್ದೆಯ ಉದ್ದೇಶ ಈ ಕಾಯ್ದೆಯನ್ನು ಯಾರು ವಿರೋಧಿಸಬಾರದು ಎಂದು ಅಮಿತ್ ಶಾ ಮನವಿ ಮಾಡಿದ್ದಾರೆ.
ಸಿ ಎ ಚಾರಿಗೆ ಅಗತ್ಯವಿರುವ ನಿಯಮಗಳನ್ನು ಈಗಾಗಲೇ ರೂಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದು ಪೌರತ್ವ ನೀಡುವ ಇಡೀ ಪ್ರಕ್ರಿಯೆ ಆನ್ಲೈನ್ ಮೂಲಕವೇ ನಡೆಯಲಿದೆ.
ಭಾರತದ ಪೌರತ್ವ ಕೋರಿ ಅರ್ಜಿ ಸಲ್ಲಿಸುವವರು ತಾವು ಭಾರತಕ್ಕೆ ಬಂದ ವರ್ಷವನ್ನು ನಮೂದಿಸಬೇಕು. ಪ್ರಯಾಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಿಲ್ಲ ಎಂದು ನಿಯಮದಲ್ಲಿ ಹೇಳಲಾಗಿದೆ.